ಬೆಂಗಳೂರು: ಬೆಂಗಳೂರು ಸಂಚಾರ ಪೊಲೀಸರ ವಿನೂತನ ಆಹ್ವಾನಕ್ಕೆ ಸ್ಪಂದಿಸಿದ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರೊಂದಿಗೆ ಚರ್ಚಿಸಿ, ಪೊಲೀಸ್ ಆ್ಯಪ್ ಮೂಲಕ ನೋಂದಾಯಿಸಿಕೊಂಡು, ಮಂಗಳವಾರ ಬೆಳಗ್ಗೆ 9 ಗಂಟೆಯಿಂದಲೇ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು.
ಈ ಅನುಭವದಿಂದ ಸಂಚಾರಿ ಪೊಲೀಸರು ಎದುರಿಸುವ ಸಮಸ್ಯೆಗಳನ್ನು ಹತ್ತಿರದಿಂದ ಅರಿತ ಸುರೇಶ್ ಕುಮಾರ್, ಸಂಚಾರ ನಿಯಮ ಪಾಲನೆಯಲ್ಲಿ ನಾಗರಿಕರ ಮಾನಸಿಕತೆಯು ಪ್ರಮುಖ ಸವಾಲಾಗಿದೆ ಎಂಬುದನ್ನು ಅವರು ಗಮನಿಸಿದರು. ಹೆಲ್ಮೆಟ್ ಧರಿಸದಿರುವುದು, ವಾಹನದಲ್ಲಿ ಹೆಚ್ಚು ಜನರನ್ನು ಸಾಗಿಸುವುದು ಮತ್ತು ಪಾದಚಾರಿ ಮಾರ್ಗದಲ್ಲಿ ವಾಹನ ನಿಲ್ಲಿಸುವಂತಹ ನಡವಳಿಕೆಗಳು ಸಂಚಾರಕ್ಕೆ ಅಡ್ಡಿಯಾಗುತ್ತವೆ ಎಂದು ವಿವರಿಸಿದರು.
For More Updates Join our WhatsApp Group :
