ಸಾರ್ವಜನಿಕರ ಅಹವಾಲುಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ : ಪೊಮ್ಮಲ ಸುನೀಲ್ ಕುಮಾರ್

ಸಾರ್ವಜನಿಕರ ಅಹವಾಲುಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ : ಪೊಮ್ಮಲ ಸುನೀಲ್ ಕುಮಾರ್

 ಫೋನ್-ಇನ್ ಕಾರ್ಯಕ್ರಮಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ

ಬೆಂಗಳೂರು: ನಾಗರಿಕರಿಂದ ಬಂದಂತಹ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಮಸ್ಯೆಗಳನ್ನು ಬಗೆಹರಿಸಲು *ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್* ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಇಂದು ಬೆಳಿಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿರುವ ನಗರ ಪಾಲಿಕೆಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆದ *”ಫೋನ್–ಇನ್ ಕಾರ್ಯಕ್ರಮ”* ದಲ್ಲಿ ನಾಗರಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದ ವೇಳೆ ವಿವಿಧ ವಾರ್ಡ್‌ಗಳಿಂದ ಮುಖ್ಯವಾಗಿ ರಸ್ತೆ ನಿರ್ವಹಣೆ, ಘನತ್ಯಾಜ್ಯ ಸಮಸ್ಯೆ ಸೇರಿದಂತೆ ಇನ್ನಿತರೆ ದೂರುಗಳನ್ನು ಖುದ್ದಾಗಿ ಆಲಿಸಿದ ಆಯುಕ್ತರು, ಅವುಗಳ ತ್ವರಿತ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

*ಇಂದು ನಡೆದ ಫೋನ್–ಇನ್ ಕಾರ್ಯಕ್ರಮದಲ್ಲಿ ಒಟ್ಟು 40 ಕರೆಗಳು ಸ್ವೀಕರಿಸಲ್ಪಟ್ಟು 45 ಅಹವಾಲುಗಳು* ದಾಖಲಾಗಿವೆ. ರಸ್ತೆ ನಿರ್ವಹಣೆ ಹಾಗೂ ಘನತ್ಯಾಜ್ಯ ಸಂಬಂಧಿತ ಸಮಸ್ಯೆಗಳ ಕುರಿತು ಹೆಚ್ಚಿನ ದೂರುಗಳು ಬಂದಿದ್ದು, ಇವುಗಳೊಂದಿಗೆ ಅರಣ್ಯ, ಇ-ಖಾತಾ ಸೇವೆಗಳು, ವಿದ್ಯುತ್, ಉದ್ಯಾನಗಳು ಹಾಗೂ ಇತರೆ ವಿಭಾಗಗಳಿಗೆ ಸಂಬಂಧಿಸಿದ ಅಹವಾಲುಗಳೂ ದಾಖಲಾಗಿವೆ. ಎಲ್ಲಾ ಅಹವಾಲುಗಳನ್ನು ಪರಿಶೀಲಿಸಿ ತಕ್ಷಣ ಸ್ಪಂದಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ನಾಗರಿಕರ ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಿ, ಕೂಡಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರವೂ ಫೋನ್–ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ. ಈ ಕಾರ್ಯಕ್ರಮವನ್ನು ನಿರಂತರವಾಗಿ ಮುಂದುವರೆಸಿ ನಾಗರಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಈ ವೇಳೆ ಅಪರ ಆಯುಕ್ತರು (ಕಂದಾಯ-ಪ್ರಭಾರ) ಶ್ರೀಮತಿ ಪಲ್ಲವಿ, ಮುಖ್ಯ ಅಭಿಯಂತರರಾದ ರಾಘವೇಂದ್ರ ಪ್ರಸಾದ್,  ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *