ಮಂಗಳವಾರ ಚಿನ್ನದ ದರ ಕೊಂಚ ಇಳಿಕೆ, ಬೆಳ್ಳಿ ತುಸು ಏರಿಕೆ

ಬೆಂಗಳೂರು: ಜುಲೈ 16 ರಂದು ಚಿನ್ನದ ದರದಲ್ಲಿ ಕೊಂಚ ಇಳಿಕೆಯಾದ್ರೆ, ಬೆಳ್ಳಿ ದರದಲ್ಲಿ ತುಸು ಏರಿಕೆಯಾಗಿದೆ. ಹಾಗಾದ್ರೆ ದೇಶದಾದ್ಯಂತ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ, 22 ಕ್ಯಾರೆಟ್‌ ಚಿನ್ನಕ್ಕೆ ಎಷ್ಟು, 24 ಕ್ಯಾರೆಟ್‌ ಚಿನ್ನಕ್ಕೆ ಎಷ್ಟು ಎಂಬಿತ್ಯಾದಿ ವಿವರ ಇಲ್ಲಿದೆ.

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,750 ರೂ ಇದೆ. ನಿನ್ನೆ 6,760 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 10 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,000 ರೂ ನೀಡಬೇಕು. ನಿನ್ನೆ 54,080 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 80 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 67,500 ರೂ ಇದೆ. ನಿನ್ನೆ 67,600 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 100 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,75,000 ರೂ. ನೀಡಬೇಕು. ನಿನ್ನೆ 6,76,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 1,000 ರೂ. ಇಳಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,364 ರೂ. ಇದೆ. ನಿನ್ನೆ 7,375 ರೂ. ಇದು ಈ ದರಕ್ಕೆ ಹೋಲಿಸಿದರೆ 11 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 58,912 ರೂ. ನೀಡಬೇಕು. ನಿನ್ನೆ 59,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 88 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 73,640 ನೀಡಬೇಕು. ನಿನ್ನೆ 73,750 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 110 ರೂ ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,36,400 ರೂ. ಇದೆ. ನಿನ್ನೆ 7,37,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 1,100 ರೂ ಕಡಿಮೆಯಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (1 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 6,750 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 7,364 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು

ಬೆಳ್ಳಿ ದರ

ಇಂದು ಬೆಳ್ಳಿ ದರ ತುಸು ಹೆಚ್ಚಾಗಿದೆ. ಒಂದು ಗ್ರಾಂ ಬೆಳ್ಳಿಗೆ 95.20 ರೂ. ಇದೆ. 8 ಗ್ರಾಂಗೆ 761.60 ರೂ ಇದ್ದರೆ, 10 ಗ್ರಾಂಗೆ 952 ರೂ. ಇದೆ. 100 ಗ್ರಾಂಗೆ 9,520 ರೂ. ಹಾಗೂ 1 ಕಿಲೋಗೆ 95,200 ರೂ. ಬೆಲೆ ನಿಗದಿ ಆಗಿದೆ.

Leave a Reply

Your email address will not be published. Required fields are marked *