ಬೆಂಗಳೂರು ದಕ್ಷಿಣ ಹೆಸರು ಬದಲಾವಣೆಗೆ ವಿರೋಧ : ಡಾ.ಸಿಎನ್ ಮಂಜುನಾಥ

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ವಿಚಾರವಾಗಿ ಸಂಸದ ಡಾ.ಸಿಎನ್ ಮಂಜುನಾಥ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಸಮಂಜಸವಲ್ಲ ಎಂದು ತಿಳಿಸಿದ್ದಾರೆ.

ಈ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮಂಜುನಾಥ್, “ಯಾವುದೇ ಕಾರಣಕ್ಕೂ ರಾಮನಗರ ಬೆಂಗಳೂರಿಗೆ ಸೇರಬಾರದು, ಹೀಗೆ ಆದರೆ ಮುಂದೊಂದು ದಿನ ಕೋಲಾರವನ್ನು ಬೆಂಗಳೂರು ಪೂರ್ವಕ್ಕೆ ಸೇರಿಸುವಂತೆ ಪ್ರಸ್ತಾಪ ಬರುತ್ತದೆ. ಚಿಕ್ಕಬಳ್ಳಾಪುರವನ್ನು ಬೆಂಗಳೂರು ಉತ್ತರಕ್ಕೂ ಹಾಗೂ ಸುತ್ತಮುತ್ತಲ ಜಿಲ್ಲೆಗಳನ್ನು ನಗರಕ್ಕೆ ಸೇರಿಸುವಂತೆ ಪ್ರಸ್ತಾವನೆಗಳು ಬರುತ್ತವೆ. ಹೀಗಾಗಿ ಇದೊಂದು ಅವೈಜ್ಞಾನಿಕ ಯೋಜನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ರಾಮನಗರಕ್ಕೆ ಐತಿಹಾಸಿಕ, ಪೌರಾಣಿಕ, ಧಾರ್ಮಿಕ ಹಾಗೂ ಇತಿಹಾಸದ ಭಾವನೆಗಳಿವೆ. ಕ್ಲೋಸ್‌ಪೇಟೆಗೆ ರಾಮನಗರ ಎಂದು ನಾಮಕರಣ ಮಾಡಿದವರು ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯನವರು. ಧಾರ್ಮಿಕ ಗುರುಗಳಾದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳು, ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಇದೇ ರಾಮನಗರ ಜಿಲ್ಲೆಯವರು” ಎಂದು ಮಂಜುನಾಥ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *