ಋತುಚಕ್ರ ರಜೆಗೆ ವಿರೋಧ.

ಋತುಚಕ್ರ ರಜೆಗೆ ವಿರೋಧ.

ಪುರುಷ ಸರ್ಕಾರಿ ನೌಕರರಿಂದ ಸರ್ಕಾರಕ್ಕೆ ಪತ್ರ.

ಬೆಂಗಳೂರು: ಮಹಿಳಾ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಋತುಚಕ್ರ ರಜೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ರಾಜ್ಯ ಶಿಷ್ಟಾಚಾರ ವಿಭಾಗದ ನೌಕರರು ಈ ಕುರಿತು ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, ತಿಂಗಳಿಗೆ ಒಂದು ದಿನದಂತೆ ವರ್ಷಕ್ಕೆ 12 ಋತುಚಕ್ರ ರಜೆ ನೀಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಶಿಷ್ಟಾಚಾರ ವಿಭಾಗದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ ಅವರ ನೇತೃತ್ವದಲ್ಲಿ ಸಲ್ಲಿಸಿರುವ ಈ ಪತ್ರದಲ್ಲಿ, ಸಮರ್ಪಕ ಅಧ್ಯಯನ ನಡೆಸದೇ ಋತುಚಕ್ರ ರಜೆಯನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂದು ಉಲ್ಲೇಖಿಸಲಾಗಿದೆ.

ಈಗಾಗಲೇ ಸರ್ಕಾರಿ ನೌಕರರಿಗೆ ಲಭ್ಯವಿರುವ ವಿವಿಧ ರಜೆಗಳನ್ನು ಮಹಿಳಾ ನೌಕರರು ಬಳಸಿಕೊಳ್ಳಬಹುದು ಎಂಬ ಸಲಹೆಯನ್ನೂ ಪತ್ರದಲ್ಲಿ ನೀಡಲಾಗಿದೆ.

‘ಪುರುಷ ನೌಕರರ ಮೇಲೆ ಹೆಚ್ಚುವರಿ ಹೊರೆ’

ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಹೆಚ್ಚುವರಿ ರಜೆ ನೀಡುವುದರಿಂದ ಪುರುಷ ನೌಕರರ ಮೇಲೆ ಹೆಚ್ಚುವರಿ ಕೆಲಸದ ಹೊರೆ ಬೀಳುತ್ತಿದೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಪುರುಷ ಮತ್ತು ಮಹಿಳಾ ನೌಕರರ ನಡುವೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

ಮಹಿಳಾ ಸಿಬ್ಬಂದಿ ಹೆಚ್ಚಿರುವ ಇಲಾಖೆಗಳಲ್ಲಿ ಕರ್ತವ್ಯಗಳಿಗೆ ಸಮಸ್ಯೆ

ವಿಶೇಷವಾಗಿ, ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿನ ದೈನಂದಿನ ಕರ್ತವ್ಯಗಳಿಗೆ ಋತುಚಕ್ರ ರಜೆ ಅಡಚಣೆಯಾಗಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ರಜೆಗಳ ಕಾರಣದಿಂದ ಕೆಲಸಗಳು ಪೆಂಡಿಂಗ್ ಆಗಿ, ಅದರ ಒತ್ತಡ ಪುರುಷ ನೌಕರರ ಮೇಲೆ ಮಾತ್ರವಲ್ಲದೆ ಮಹಿಳಾ ನೌಕರರಿಗೂ ಸಂಕಷ್ಟ ಉಂಟುಮಾಡುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *