‘ಜನ ನಾಯಗನ್’ ಟ್ರೇಲರ್‌ಗೆ ವಿರೋಧ.

‘ಜನ ನಾಯಗನ್’ ಟ್ರೇಲರ್‌ಗೆ ವಿರೋಧ.

ನಿರೀಕ್ಷೆಗೂ ಮುನ್ನವೇ ವಿವಾದ.

ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಿ ‘ಜನ ನಾಯಗನ್’ ಮೂಡಿ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆದರೆ, ಯಾವಾಗ ಚಿತ್ರದ ಟ್ರೇಲರ್ ಬಿಡುಗಡೆ ಆಯಿತೋ ಅಲ್ಲಿಂದ ಸಿನಿಮಾಗೆ ಹಿನ್ನಡೆ ಉಂಟಾಗುತ್ತಿದೆ. ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಇದು ಎಂಬುದು ಟ್ರೇಲರ್ ನೋಡಿದವರಿಗೆ ಸ್ಪಷ್ವವಾಗಿದೆ. ಇದರ ಜೊತೆಗೆ ಎಐ ಚಿತ್ರ ಟ್ರೇಲರ್​​ನಲ್ಲಿ ಬಳಕೆ ಮಾಡಲಾಗಿದೆ. ಇದಕ್ಕೆ ಅನೇಕರು ಕೋಪ ಹೊರಹಾಕಿದ್ದಾರೆ.

‘ಜನ ನಾಯಗನ್’ ಇದು ದಳಪತಿ ವಿಜಯ್ ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾ. ಇದು ಅವರ ಕೊನೆಯ ಚಿತ್ರ ಕೂಡ ಹೌದು. ಹೀಗಾಗಿ, ಸಹಜವಾಗಿಯೇ ನಿರೀಕ್ಷೆ ಇದೆ. ಸಿನಿಮಾಗೆ ಹೈಪ್ ಸಿಗಬೇಕು ಎಂದರೆ ಚಿತ್ರದ ಟ್ರೇಲರ್ ಬಿಡುಗಡೆ ಆಗಬೇಕು. ಆದರೆ, ‘ಜನ ನಾಯಗನ್’ ವಿಷಯದಲ್ಲಿ ಅದು ಉಲ್ಟಾ ಆಗಿದೆ. ಟ್ರೇಲರ್ ರಿಲೀಸ್ ಬಳಿಕ ಚಿತ್ರಕ್ಕೆ ನೆಗೆಟಿವ್ ಕಮೆಂಟ್ ಹೆಚ್ಚಿದೆ.

‘ಜನ ನಾಯಗನ್’ ಚಿತ್ರ ‘ಭಗವಂತ ಕೇಸರಿ’ಯ ರಿಮೇಕ್ ಎಂದು ಹೇಳಲಾಗುತ್ತಾ ಬರುತ್ತಿತ್ತು. ಆದರೆ, ತಂಡ ಇದನ್ನು ಒಪ್ಪಿಲ್ಲ. ಈಗ ಸಿನಿಮಾದ ಟ್ರೇಲರ್ ನೋಡಿದ ಬಳಿಕ ಇದು ಸ್ಪಷ್ಟವಾಗಿದೆ. ಇದರ ಜೊತೆಗೆ ಒಂದು ಶಾಟ್​​ನ ಜೆಮಿನಿ ಎಐ ಬಳಸಿ ರಚಿಸಲಾಗಿದೆ. ದುರಂತ ಎಂದರೆ ಜೆಮಿನಿ ಎಐ ಲೋಗೋನ ತೆಗೆಯಲು ತಂಡದವರು ಮರೆತಿದ್ದಾರೆ.

ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ನೂರಾರು ಕೋಟಿ ರೂಪಾಯಿ ಹಾಕಿ ಮಾಡೋ ಸಿನಿಮಾದಲ್ಲಿ ಈ ರೀತಿಯ ತಪ್ಪುಗಳು ಆದರೆ ಪ್ರೇಕ್ಷಕರಿಗೆ ಅದು ಕೋಪ ತರಿಸುತ್ತದೆ. ಇನ್ನು ಕೆಲವು ಶಾಟ್​​ಗಳಿಗೆ ನಿರ್ದೇಶಕ ‘ಎಐ’ ಮೊರೆ ಹೋಗುತ್ತಾನೆ ಎಂದಾದರೆ ಅಸಲಿ ಸಿನಿಮಾದ ಮಜ ಹೇಗೆ ಸಿಗೋಕೆ ಸಾಧ್ಯ ಎಂಬ ಪ್ರಶ್ನೆ ಮೂಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *