SC and ST ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ

SC and ST ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ  ನೆರವನ್ನು ಸರ್ಕಾರ ಒದಗಿಸಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಭೆಯ ಮುಖ್ಯಾಂಶಗಳು:

ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವುದರ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆ ಪ್ರಾರಂಭಿಸಲು  ಮುಖ್ಯಮಂತ್ರಿಗಳು ಸೂಚಿಸಿದರು .

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಕೈಗಾರಿಕೆಗಳಿಗೆ ಇದುವರೆಗೂ 192 ಎಕರೆ ಮಂಜೂರು ಆಗಿದ್ದು,ಇನ್ನೂ  280 ಎಕರೆ ಪ್ರದೇಶದ ಅವಶ್ಯಕತೆ ಇರುವುದಾಗಿ ಸಲ್ಲಿಸಿದ ಮನವಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಿದ ಕೈಗಾರಿಕಾ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಂಘದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದನ್ನು ಪರಿಶೀಲಿಸಿ  ಸೂಕ್ತ ಕ್ರಮ ತೆಗೆದುಕೊಳ್ಳುವಂತೆಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ ಎಲ್ಲಾ ನೆರವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ  ವಿವಾದಗಳಿರುವಂತಹ ಭೂಮಿಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವ ಸಮಸ್ಯೆಗೆ ಸ್ಪಂದಿಸಿ ಕೈಗಾರಿಕೆ ಪ್ರದೇಶದಲ್ಲಿ ಸೂಕ್ತ ಪ್ರದೇಶಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು .

ಸಮಾಜ ಕಲ್ಯಾಣ ಇಲಾಖೆಯಿಂದ  ಉದ್ದಿಮೆದಾರರಿಗೆ ಬರಬೇಕಾಗಿರುವ ಬಾಕಿ ಇರುವ ಹಣ ಶೀಘ್ರ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು ಕೆಐಎಡಿಬಿ ಇ ಖಾತಾ ಹಂಚಿಕೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು .

Leave a Reply

Your email address will not be published. Required fields are marked *