ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,
ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. . ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ಎಲ್ ಭೈರಪ್ಪ ಅವರು ಇಂದು (ಸೆಪ್ಟೆಂಬರ್ 24) ಮಧ್ಹಾಹ್ನ 2.38ಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆಸ್ಪತ್ರೆ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಭೈರಪ್ಪ ಅವರ ಕಾದಂಬರಿಗಳು
ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂಬುದು ಎಸ್.ಎಲ್. ಬೈರಪ್ಪ ಅವರ ಪೂರ್ಣ ಹೆಸರು. ಭೈರಪ್ಪ ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಪ್ರಮುಖ ಕೃತಿಗಳೆಂದರೇ, ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ. ಬೈರಪ್ಪ ಅವರಿಗೆ ಬಂದ ಪದವಿಗಳು ಮತ್ತು ಪ್ರಶಸ್ತಿಗಳು ಅಂದರೇ, ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. ವಿಶೇಷತೆ ಅಂದರೆ, ಭೈರಪ್ಪನವರ ಕಾದಂಬರಿಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದು, ಅನೇಕ ಸಾರ್ವಜನಿಕ ಚರ್ಚೆಗಳಿಗೆ ಕಾರಣವಾಗಿವೆ.
For More Updates Join our WhatsApp Group :
