Pahalgam terror attack ಪ್ರಕರಣ: ಮೃತ ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಪಡೆದ NIA

Pahalgam terror attack ಪ್ರಕರಣ: ಮೃತ ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಪಡೆದ NIA

ಬೆಂಗಳೂರು: ಜಮ್ಮು – ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಿ (NIA) ಈಗಾಗಲೇ ಆರಂಭಿಸಿದೆ. ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅವರ ಪತ್ನಿಯಿಂದ ಎನ್ಐಎ ಅಧಿಕಾರಿಗಳ ತಂಡ ಮಾಹಿತಿ ಪಡೆದುಕೊಂಡಿದೆ.

ಮತ್ತಿಕೆರೆಯ ಸುಂದರ್ ನಗರದಲ್ಲಿರುವ ಭರತ್ ಭೂಷಣ್ ನಿವಾಸಕ್ಕೆ ಶುಕ್ರವಾರವೇ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳ ತಂಡ, ಭರತ್ ಭೂಷಣ್ ಅವರ ಪತ್ನಿ ಸುಜಾತರಿಂದ ಘಟನಾ ದಿನದ ಮಾಹಿತಿ ಪಡೆದುಕೊಂಡಿದೆ. ದಾಳಿ ನಡೆದ ಸಂದರ್ಭದಲ್ಲಿನ ಘಟನಾವಳಿಗಳು, ಕೃತ್ಯಕ್ಕೆ ಮುನ್ನ ಉಗ್ರರು ಏನು ಮಾತನಾಡಿದರು, ಅವರ ಮುಖಚಹರೆ ಮತ್ತಿತರ ವಿವರಗಳನ್ನ ಎನ್ಐಎ ಅಧಿಕಾರಿಗಳು ಕಲೆಹಾಕಿದ್ದಾರೆ.

ಏಪ್ರಿಲ್ 22ರಂದು ಜಮ್ಮು – ಕಾಶ್ಮೀರದ ಬೈಸರನ್ ಕಣಿವೆಯ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿದಂತೆ 26 ಜನ ಅಮಾಯಕರು ಸಾವನ್ನಪ್ಪಿದರೆ, 20 ಜನ ಗಾಯಗೊಂಡಿದ್ದರು. ಪ್ರಕರಣದ ತನಿಖೆಯನ್ನ ಎನ್ಐಎಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿತ್ತು. ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳ ತಂಡ ಉಗ್ರ ಕೃತ್ಯ ನಡೆದ ಸ್ಥಳ, ಉಗ್ರರ ಪ್ರವೇಶ ಮತ್ತು ನಿರ್ಗಮನದ ಕುರುಹುಗಳ ಕುರಿತು ಈಗಾಗಲೇ ಪರಿಶೀಲನೆ ಆರಂಭಿಸಿದೆ.

Leave a Reply

Your email address will not be published. Required fields are marked *