ಪನ್ನೂನ್ ಹ* ಸಂಚು ಪ್ರಕರಣ: ನಿಖಿಲ್ ಗುಪ್ತಾ ಅಮೆರಿಕದಲ್ಲಿ ತಪ್ಪು ಒಪ್ಪಿಕೆ.

ಪನ್ನೂನ್ ಹ* ಸಂಚು ಪ್ರಕರಣ: ನಿಖಿಲ್ ಗುಪ್ತಾ ಅಮೆರಿಕದಲ್ಲಿ ತಪ್ಪು ಒಪ್ಪಿಕೆ.

ಭಾರತೀಯ ಪ್ರಜೆ ನಿಖಿಲ್ ಗುಪ್ತಾ ‘ಹ* ಸಂಚಿನಲ್ಲಿ ಭಾಗವಹಿಸಿದ್ದೆ’ ಎಂದು ಒಪ್ಪಿಕೊಂಡರು.

ನ್ಯೂಯಾರ್ಕ್ : ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಖಲಿಸ್ತಾನಿ ನಾಯಕ ಗುರುಪತ್‌ವಂತ್ ಸಿಂಗ್ ಪನ್ನೂನ್ ಹತ್ಯೆ ಯತ್ನದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಕೊಲೆ ಸಂಚಿನ ಪ್ರಮುಖ ಆರೋಪಿ ಎನ್ನಲಾದ ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕದ ಮ್ಯಾನ್‌ಹ್ಯಾಟನ್ ಫೆಡರಲ್ ನ್ಯಾಯಾಲಯದಲ್ಲಿ ಹತ್ಯೆ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಮೆರಿಕ ಮತ್ತು ಕೆನಡಾ ಪೌರತ್ವ ಹೊಂದಿರುವ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ನಾಯಕ ಪನ್ನೂನ್ ಹತ್ಯೆಗೆ ನಿಖಿಲ್ ಗುಪ್ತಾ ಸುಪಾರಿ ನೀಡಿದ್ದ ಎಂಬ ಆರೋಪವಿದೆ. ಭಾರತದ ಸರ್ಕಾರಿ ಅಧಿಕಾರಿಯೊಬ್ಬರ ಸೂಚನೆಯ ಮೇರೆಗೆ ನಿಖಿಲ್ ಗುಪ್ತಾ ಈ ಸಂಚು ರೂಪಿಸಿದ್ದರು ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳು ಆರೋಪಿಸಿದ್ದವು.

ಪನ್ನೂನ್ ಹತ್ಯೆಗಾಗಿ ನಿಖಿಲ್ ಗುಪ್ತಾ ಹಂತಕನೊಬ್ಬನನ್ನು ಹುಡುಕುತ್ತಿದ್ದಾಗ, ಆತ ಅಮೆರಿಕದ ಗುಪ್ತಚರ ಇಲಾಖೆಯ ರಹಸ್ಯ ಏಜೆಂಟ್ ಅನ್ನೇ ಸಂಪರ್ಕಿಸಿದ್ದ. ಹತ್ಯೆಗಾಗಿ ಸುಮಾರು 1 ಲಕ್ಷ ಡಾಲರ್ ಮೊತ್ತದ ಒಪ್ಪಂದ ಮಾಡಿಕೊಳ್ಳಲಾಗಿತ್ತು ಮತ್ತು ಅದರಲ್ಲಿ 15,000 ಡಾಲರ್ ಮುಂಗಡವಾಗಿ ನೀಡಲಾಗಿತ್ತು ಎಂದು ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ. ಕಳೆದ ವರ್ಷ ಜೆಕ್ ಗಣರಾಜ್ಯದಲ್ಲಿ ನಿಖಿಲ್ ಗುಪ್ತಾನನ್ನು ಬಂಧಿಸಿ ಅಮೆರಿಕಕ್ಕೆ ಹಸ್ತಾಂತರಿಸಲಾಗಿತ್ತು.

ನ್ಯಾಯಾಲಯದಲ್ಲಿ ಏನಾಯಿತು?

ನ್ಯಾಯಾಧೀಶರ ಮುಂದೆ ಹಾಜರಾದ ನಿಖಿಲ್ ಗುಪ್ತಾ, “ಹೌದು, ನಾನು ಈ ಹತ್ಯೆ ಸಂಚಿನಲ್ಲಿ ಭಾಗಿಯಾಗಿದ್ದೆ” ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಈ ಹೇಳಿಕೆಯ ಮೂಲಕ ಈ ವಿವಾದಾತ್ಮಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಈ ತಪ್ಪೊಪ್ಪಿಗೆಯಿಂದಾಗಿ ನಿಖಿಲ್ ಗುಪ್ತಾಗೆ ಸುಮಾರು 10 ರಿಂದ 20 ವರ್ಷಗಳವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇನ್ನು ಆತನ ಹಿಂದೆ ಬೇರೆಯಾದರೂ ಇದ್ದರೆ ಎಂಬ ಬಗ್ಗೆಯೂ ತನಿಖೆಯಾಗಬಹುದು ಎಂದು ಹೇಳಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *