ಕಾರವಾರ: ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾದರೂ ಭೂಕುಸಿತ ಮಾತ್ರ ನಿಲ್ಲುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ ಗ್ರಾಮದ ಬಳಿಯ ದೇವಿಮನೆ ಘಟ್ಟ ಭಾಗ ರಾಷ್ಟ್ರೀಯ ಹೆದ್ದಾರಿ 766 (ಇ) ಮೇಲೆ ಕುಸಿದು ಬಿದ್ದಿದೆ. ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಗುಡ್ಡ ಕಳೆದ ಎರಡು ದಿನಗಳಿಂದ ನಿರಂತರವಾಗಿ ಕುಸಿಯುತ್ತಿದೆ. ಇನ್ನು, ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಮೇಲೂ ಭೂಕುಸಿತವಾಗಿದೆ. ಭಾರಿ ಪ್ರಮಾಣದ ಮಣ್ಣು, ಕಲ್ಲು ಬಂಡೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ.