ಆಸ್ತಿ ತೆರಿಗೆ ಪಾವತಿ: ಜುಲೈ 31ರವರೆಗೆ ಮಾತ್ರ one time settlement ಅವಕಾಶ

ಬಿಬಿಎಂಪಿಯ ಎಲ್ಲಾ ವಾರ್ಡ್ಗೆ ನೋಡಲ್ ಅಧಿಕಾರಿ ನೇಮಕ: ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ.

ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ “ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು.

ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಕಾಯ್ದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸಲು ಮುಂದಾಗಿದೆ. ನಾಗರಿಕರು ಈ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ

20 ಲಕ್ಷ ಆಸ್ತಿ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಮಾಡಲಾಗುತ್ತಿದೆ. ಈ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುವುದು. 20 ಲಕ್ಷ ಆಸ್ತಿಗಳ ಪೈಕಿ 8 ಲಕ್ಷ ಆಸ್ತಿಗಳ ದಾಖಲೆಗಳು ಡಿಜಿಟಲೀಕರಣವಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಉಳಿದ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *