ಬೆಂಗಳೂರು: ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಹಂದಿ’ ಹೇಳಿಕೆ ನೀಡಿದ್ದ ಲೋಕಾಯುಕ್ತ ಎಸ್ಐಟಿ ಎಡಿಜಿಪಿ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರ ವಿರುದ್ಧ ಜ್ಯಾತ್ಯಾತೀತ ಜನತಾದಳ (JDS) ಸರಣಿ ಆರೋಪಗಳನ್ನೇ ಮಾಡಿದೆ.
ಹೌದು.. ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ ಎಂದು ಕರೆದಿರುವ ಜೆಡಿಎಸ್, ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಿನಲ್ಲಿ ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡವನ್ನು ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ ತಿಳಿಸುವಿರಾ? ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಬೇಕಲ್ಲವೇ..? ಎಂದು ಗಂಭೀರ ಆರೋಪ ಮಾಡಿದೆ.
ಎಕ್ಸ್ ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ‘ಕೇಂದ್ರ ಸಚಿವರ ಕುರಿತು ಕೀಳುಮಟ್ಟದ ಪದ ಬಳಸಿರುವುದು ಅಕ್ಷಮ್ಯ. ಎಂ.ಚಂದ್ರಶೇಖರ್ ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ? ಭೂವ್ಯವಹಾರವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ. ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ. ಬಹುಮಹಡಿ ವಾಣಿಜ್ಯ ಕಟ್ಟಡ ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡ. ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡ. ಕೆರೆ ಒತ್ತುವರಿ ಮಾಡಿಕೊಂಡ ಅಕ್ರಮಗಳ ಬಗ್ಗೆ ತನಿಖೆ ನಡೆಯಬೇಕಲ್ಲವೇ? ಎಂದು ಗಂಭೀರ ಆರೋಪ ಮಾಡಿದೆ.