ಪೋಕ್ಸೋ ಪ್ರಕರಣ: BSY ಬಂಧಿಸದಂತೆ, ವಿಚಾರಣೆಗೆ ಹಾಜರಾಗಲು ನೀಡಿದ್ದ ವಿನಾಯ್ತಿ ವಿಸ್ತರಣೆ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಹಾಜರಾಗಲು ಈ ಹಿಂದೆ ನೀಡಿದ್ದ ವಿನಾಯ್ತಿಯನ್ನು ಹೈಕೋರ್ಟ್ ವಿಸ್ತರಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ”ಅರ್ಜಿ ತಿದ್ದುಪಡಿಗಾಗಿ ಮನವಿ ಮಾಡಲಾಗಿದೆ. ಸರ್ಕಾರದಿಂದ ಇದಕ್ಕೆ ಆಕ್ಷೇಪ ಇಲ್ಲದಿದ್ದಲ್ಲಿ ಕಾಲಾವಕಾಶ ನೀಡಬೇಕು” ಎಂದು ಕೋರಿದರು.

ಇದಕ್ಕೆ ಪೀಠ, ”ಸರ್ಕಾರದ ಪರ ವಕೀಲರನ್ನು ಅರ್ಜಿ ತಿದ್ದುಪಡಿಗೆ ಆಕ್ಷೇಪ ಇಲ್ಲವೇ” ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರದ ವಕೀಲರು, ”ಆಕ್ಷೇಪಣೆ ಇಲ್ಲ” ಎಂದು ಹೇಳಿದರು.

ಇದೇ ವೇಳೆ ಯಡಿಯೂರಪ್ಪರವನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಕೋರಿ ಸಂತ್ರಸ್ತೆಯ ಪರ ವಕೀಲರು, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿತು.

Leave a Reply

Your email address will not be published. Required fields are marked *