POCSO Case: ಖುದ್ದು ಹಾಜರಿಯಿಂದ BSYಗೆ ಹೈಕೋರ್ಟ್ ವಿನಾಯ್ತಿ

ಬೆಂಗಳೂರು || ರಾಜ್ಯ ಸರಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ: ಯಡಿಯೂರಪ್ಪ

ಬೆಂಗಳೂರು: ಪೋಕ್ಸೊ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.

ಹೌದು.. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿದ್ದು, ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಬಿಎಸ್ ವೈ ಮಾತ್ರವಲ್ಲದೇ ಇತರೆ ಆರೋಪಿಗಳಿಗೂ ಖುದ್ದು ಹಾಜರಿಯಿಂದ ವಿನಾಯಿತಿ ನೀಡಲಾಗಿದೆ.

ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ. ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಖುದ್ದು ಹಾಜರಿಗೆ ಹೈಕೋರ್ಟ್ ವಿನಾಯಿತಿ ನೀಡಿದೆ.

Leave a Reply

Your email address will not be published. Required fields are marked *