ಬೆಂಗಳೂರು: ಪೋಕ್ಸೋ ಕೇಸ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಕೋರ್ಟ್ ಶಾಕ್ ಕೊಟ್ಟಿದೆ. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಈ ಬಗ್ಗೆ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಬಿಎಸ್ವೈ ಖುದ್ದು ಅರ್ಜಿ ಸಲ್ಲಿಸಬಹುದು ಎಂದಿರುವ ಕೋರ್ಟ್ ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧ ಫೆಬ್ರವರಿ 28ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು.
For More Updates Join our WhatsApp Group :
