ತುಮಕೂರಿನ 30 ಕಾಲೇಜುಗಳಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ

ತುಮಕೂರು : ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಶಸಸ್ತç ಪೊಲೀಸ್ ಪೇದೆ ನೇಮಕಾತಿ ಲಿಖಿತ ಪರೀಕ್ಷೆ ನಡೆಸುತ್ತಿದೆ. ಜ.28 ರಂದು ಬೆಳಗ್ಗೆ 11 ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದ್ದು, ತುಮಕೂರಿನ 30 ಕಾಲೇಜುಗಳನ್ನು ಈ ಪರೀಕ್ಷೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ತುಮಕೂರಿನ ಒಟ್ಟು ಪರೀಕ್ಷಾ ಕೇಂದ್ರಗಳಲ್ಲಿ 15000 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2064 ಖಾಲಿ ಇರುವ ಹುದ್ದೆಗಳಿಗೆ ರಾಜ್ಯಾದ್ಯಂತ ಈ ಪರೀಕ್ಷೆ ನಡೆಯುತ್ತಿದೆ.

ಪರೀಕ್ಷೆ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೆಲವು ಸಲಹೆಗಳನ್ನು ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಸೂಚನೆ ನೀಡಿದ್ದಾರೆ. ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಧರಿಸಬೇಕು. ಕಾಲರ್ ರಹಿತ ಶರ್ಟ್ಗಳನ್ನು ಹಾಕಬೇಕು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್ಗಳನ್ನು ಧರಿಸುವಂತಿಲ್ಲ.

ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಹೂಗಳ ನಿಷೇಧ. ತೆಳುವಾದ ಪಾದರಕ್ಷೆಗಳನ್ನು ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸಬಾರದು. ಮೊಬೈಲ್, ಏರ್‌ಫೋನ್, ಸ್ಪೆನ್‌ಡ್ರೆöÊವ್‌ಗಳನ್ನು ಬಳಸುವಂತಿಲ್ಲ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ಬೆಳಗ್ಗೆ ೧೧ ರಿಂದ ೧೨.೩೦ರವರೆಗೆ ತುಮಕೂರು ಸೇರಿದಂತೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ.

Pragati TV Social Connect for more latest u

Leave a Reply

Your email address will not be published. Required fields are marked *