ಮಂಗಳೂರು: ನಗರದ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಇಂದು ನಸುಕಿನ ಜಾವ ಜೈಲಿನ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ನಡೆಸಿದರು.
25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್‌ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3 ಕೇಬಲ್‌ಗಳು ಮತ್ತು ಗಾಂಜಾ ಹಾಗೂ ಇತರ ಡ್ರಗ್ಸ್ಗಳ ಪ್ಯಾಕೆಟ್‌ಗಳನ್ನು ಜೈಲಿನಿಂದ ಪೊಲೀಸಲು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಮಪ್ ಅಗರ್‌ವಾಲ್ ಮಾರ್ಗದರ್ಶನದಲ್ಲಿ ಪೊಲೀಸರು ನಸುಕಿನ ಜಾವ 4 ಗಂಟೆಗೆ ಕಾರ್ಯಾಚರಣೆಗೆ ಇಳಿದಿದ್ದರು. ಜೈಲಿನ ಎಲ್ಲಾ ಬ್ಲಾಕ್‌ಗಳನ್ನು ಏಕಕಾಲದಲ್ಲಿ ಶೋಧಿಸಲು ಹಲವು ತಂಡಗಳನ್ನು ರಚಿಸಲಾಗಿತ್ತು. ಕೊನೆಯ ಕ್ಷಣದವರೆಗೂ ದಾಳಿಯ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ 2 ಡಿಸಿಪಿಗಳು, 3 ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು.