ಡಿಕೆ ಶಿವಕುಮಾರ್ ಬೆಂಬಲಿಸಿದವರಿಗೆ ಅನ್ಯಾಯ? ಪ್ರಣವಾನಂದಶ್ರೀ ಆಕ್ರೋಶ.
ಬೆಂಗಳೂರು : ಮೇ ತಿಂಗಳಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆ ವಿಚಾರವಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್ನ್ನ ಇಂದು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಬಜೆಟ್ನಲ್ಲಿ ಸ್ವಾಮೀಜಿಗಳಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಿಎಂ ಪರವಾಗಿ ಮಾತನಾಡಿದ ಸ್ವಾಮೀಜಿಗಳಿಗೆ ಭೂಮಿ ಕೊಟ್ಟಿದ್ದಾರೆ. ಬಡ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಯಾಕೆ ಅನುದಾನ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಬೇಕು. ಡಿಕೆ ಶಿವಕುಮಾರ್ನ್ನ ಸಿಎಂ ಮಾಡಬೇಕು ಎಂದು ವರಿಷ್ಠರಿಗೆ ಮನವಿ ಮಾಡ್ತೇವೆ ಎಂದಿದ್ದಾರೆ.
For More Updates Join our WhatsApp Group :



