ಫೆ. 11–12ರಂದು ಬೆಸ್ಕಾಂ ವ್ಯಾಪ್ತಿಯಲ್ಲಿ ಪವರ್ ಕಟ್.!

ಫೆ. 11–12ರಂದು ಬೆಸ್ಕಾಂ ವ್ಯಾಪ್ತಿಯಲ್ಲಿ ಪವರ್ ಕಟ್.!

ಬೆಂಗಳೂರು, ಚಿತ್ರದುರ್ಗ ಮತ್ತು ತುಮಕೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ.!

ಬೆಂಗಳೂರು: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.

ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ, ಬೇಡರಡ್ಡಿ-ಹಳ್ಳಿ, ತಿಮ್ಮಪ್ಪಯನಹಳ್ಳಿ, ಎನ್.ದೇವರಹಳ್ಳಿ, ತಳಕು, ಮೊನ್ನೆಕೋಟೆ, ದೇವರೆಡ್ಡಿಹಳ್ಳಿ, ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೂ ನಿರಂತರ ಜ್ಯೋತಿ, ಕೃಷಿ ಬಳಕೆಯ ವಿದ್ಯುತ್‌ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ರೈತರು, ಸಾರ್ವಜನಿಕರು ಸಹಕರಿಸಬೇಕೆಂದು ಎಇಇ ಎನ್​​ಜಿ ಮಮತಾ ಹಾಗೂ ಎಂಜಿನಿಯರ್ ವೆಂಕಟೇಶ್ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಫೆಬ್ರವರಿ 12ಕ್ಕೆ ತುಮಕೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್

ತುಮಕೂರಿನಲ್ಲಿ ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿ ಕೈಗೊಂಡಿರುವುದರಿಂದ ಫೆ.12ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ 66/11 ಕೆವಿ ಅಂಕಸಂದ್ರ ಉಪಸ್ಥಾವರದಿಂದ ವಿದ್ಯುತ್‌ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್

ಕೆಪಿಟಿಸಿಎಲ್ ವತಿಯಿಂದ ಜಾಲಹಳ್ಳಿ ವಿಭಾಗದ 66/11 ಕೆವಿ ಎಂಇಐ ಉಪಕೇಂದ್ರದಲ್ಲಿ ತುರ್ತು ನಿರ್ವ ಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣ ಈ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಿದೆ.

ಎಜಿಬಿಜಿ-ಲೇಔಟ್, ಭೈರವೇಶ್ವರ ಹೋಟೆಲ್, ಕಾವೇರಿ ಲೇಔಟ್, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐರ್ ಲೇಔಟ್, ಗಣೇಶ ಸಾ ಮಿಲ್, ಕೆಂಪೇಗೌಡ ನಗರ, ಬೃಂದಾವನ ಲೇಔಟ್, ಕಲ್ಯಾಣನಗರ ಬಾಗಲಗುಂಟೆ, ಸೌರ ಲೇಔಟ್, ಮೀನಾಕ್ಷಿ ಲೇಔಟ್ ಸೇರಿದಂತೆ ಹಲವು ಕಡೆಗಳಲ್ಲಿ ಪವರ್ ಕಟ್ ಆಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *