ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡುವ ಭಾಗ್ಯ ಸಿಕ್ಕಿದೆ.
ರಿಸಲ್ಟ್ ನೋಡುವ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರು ವಿಶೇಷ ತನಿಖಾ ತಂಡ (SIT) ಕಚೇರಿಯಲ್ಲಿ ಫಲಿತಾಂಶ ನೋಡುತ್ತಿದ್ದಾರೆ.
ಪೆನ್‌ಡ್ರೈವ್ ವಿಚಾರ ಹೊರಬರುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಎಸ್‌ಐಟಿ ನೋಟಿಸ್ ಜಾರಿ ಮಾಡಿದ್ದರೂ ಕ್ಯಾರೇ ಎಂದಿರಲಿಲ್ಲ. ಬಳಿಕ ಬರೋಬ್ಬರಿ 34 ದಿನಗಳ ಬಳಿಕ ಭಾರತಕ್ಕೆ ವಾಪಸ್ಸಾಗಿದ್ದರು. ಜರ್ಮನಿಯ ಮ್ಯೂನಿಕ್‌ನಿಂದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು ಲಾಕ್ ಮಾಡಿದ್ದರು
ಹಾಲಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ 5,201 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ