ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: SIT ಚಾರ್ಜ್‌ಶೀಟ್ ಸಲ್ಲಿಸಿದ ವಿಚಾರ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: SIT ಚಾರ್ಜ್‌ಶೀಟ್ ಸಲ್ಲಿಸಿದ ವಿಚಾರ.

ಎಸ್ಐಟಿ ಹಾಸನ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ ಡಾಕ್ಯುಮೆಂಟ್

ಹಾಸನ: ಕರ್ನಾಟಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ ಆರೋಪಗಳು ಸಾಬೀತಾಗಿವೆ ಎಂದು ಎಸ್​ಐಟಿ ತಿಳಿಸಿದೆ.

2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ತನಿಖೆ ಆರಂಭವಾಗಿತ್ತು.

ಅಶ್ಲೀಲ ವಿಡಿಯೋಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, 277 ಜನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ತಾಂತ್ರಿಕ ಸಾಕ್ಷ್ಯಗಳು ಹಾಗೂ ಫೋರೆನ್ಸಿಕ್ ಸೈನ್ಸ್ ಲ್ಯಾಬ್ (FSL) ವರದಿ ಆಧರಿಸಿ ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದೆ.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧದ ಆರೋಪ ಸಾಬೀತು!

ಈ ಪ್ರಕರಣದಲ್ಲಿ ಎ1 ನವೀನ್, ಎ2 ಪ್ರಜ್ವಲ್ ಅವರ ಕಾರು ಚಾಲಕರಾಗಿದ್ದ ಕಾರ್ತಿಕ್ ಎನ್, ಎ3 ಚೇತನ್ ಬಿಸಿ, ಎ4 ಚೇತನ್ ವೈ ಎಸ್, ಎ5 ಲಿಖಿತ್ ಗೌಡ ಸೇರಿದಂತೆ ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪಣೆ ಮಾಡಲಾಗಿದೆ. ಇವರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಹೆಸರುಗಳೂ ಸೇರಿವೆ. ಅದರಲ್ಲೂ ಬಿಜೆಪಿ ನಾಯಕ ಪ್ರೀತಂಗೌಡ, ಸಂಸದ ಶ್ರೇಯಸ್ ಅತ್ಯಾಪ್ತರ ವಿರುದ್ಧದ ಆರೋಪ ಸಾಬೀತುಪಡಿಸಲಾಗಿದೆ.

ಪ್ರಜ್ವಲ್ ರೇವಣ್ಣ ಹೆಸರಿಲ್ಲ!

ಇದೇ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೆಸರೂ ಉಲ್ಲೇಖವಾಗಿದ್ದರೂ, ಈ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರು ಸೇರಿಸಿಲ್ಲ ಎಂಬುದು ತಿಳಿದುಬಂದಿದೆ. ಮುಂದಿನ ತನಿಖೆ ಮತ್ತು ನ್ಯಾಯಾಲಯದ ಕ್ರಮಗಳು ಏನಿರಲಿವೆ ಬುದನ್ನು ಕಾದುನೋಡಬೇಕಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *