ಮೈಸೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಬುಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸತಃ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಮೈಸೂರು ದಸರಾ ಉದ್ಘಾಟಿನೆಗೆ ಆಯ್ಕೆ ಮಾಡಿರುವುದು ತುಂಬಾ ಸಂತಸವಾಗಿದೆ ಎಂದು ಬಾನು ಮುಷ್ತಾಕ್ ಹರ್ಷ ವ್ಯಕ್ತಪಡಿಸಿದ್ದಾರೆ. ಆದ್ರೆ, ಇದಕ್ಕೆ ಕೆಲ ಹಿಂದೂ ಸಂಘಟನೆ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಸಹ ತಕರಾರು ತೆಗೆದಿದ್ದು, ದಸರಾ 100% ಧಾರ್ಮಿಕ ಆಚರಣೆ, ನವರಾತ್ರಿ ಉತ್ಸವ ನಡೆಯುತ್ತದೆ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತೆ. ಬಾನು ಮುಷ್ತಾಕ್ ಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆಯಾ? ಸಾಹಿತಿ ಬಾನು ಮುಷ್ತಾಕ್ ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ? ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಿಸಿದರೆ ತಕಾರರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ? ಮಹಾರಾಜರ ಪರಂಪರೆಯನ್ನು ಸಿಎಂ ಹೀಗೆ ಹಾಳು ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು, ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಪ್ರತಾಪ್ ಸಿಂಹ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
For More Updates Join our WhatsApp Group :