ಪ್ರಯಾಗ್‌ರಾಜ್ || ಕುಂಭಮೇಳದಲ್ಲಿ ಡಿಕೆಶಿ ಪುತ್ರಿ – ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಐಶ್ವರ್ಯ

ಪ್ರಯಾಗ್ರಾಜ್ || ಕುಂಭಮೇಳದಲ್ಲಿ ಡಿಕೆಶಿ ಪುತ್ರಿ – ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಐಶ್ವರ್ಯ

ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಪುತ್ರಿ ಐಶ್ವರ್ಯ (Aisshwarya DKS Hegde) ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ.

ಕುಂಭಮೇಳದಲ್ಲಿ (Kumbh Mela 2025) ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ಹಂಚಿಕೊಂಡಿದ್ದಾರೆ.

ತಂದೆ ಡಿ.ಕೆ.ಶಿವಕುಮಾರ್‌ ಕುಂಭಮೇಳಕ್ಕೆ ಹೋಗುವ ಮುನ್ನ ಐಶ್ವರ್ಯ ಭೇಟಿ ಕೊಟ್ಟಿದ್ದಾರೆ. ಇದೇ ಫೆ.9, 10 ರಂದು ಕುಂಭಮೇಳಕ್ಕೆ ತೆರಳುವುದಾಗಿ ಡಿಕೆಶಿ ಹೇಳಿದ್ದರು.

ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ. 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ.

Leave a Reply

Your email address will not be published. Required fields are marked *