ಅ.3ದಂದು ಮೈಸೂರು ದಸರಾ ಉದ್ಘಾಟನೆಗೆ ಸಿದ್ದತೆ  ಈ ಬಾರಿ ಏರ್ ಶೋ ಅನುಮಾನ : ಸಚಿವ ಹೆಚ್.ಸಿ ಮಹದೇವಪ್ಪ

ಅ.೩ದಂದು ಮೈಸೂರು ದಸರಾ ಉದ್ಘಾಟನೆಗೆ ಸಿದ್ದತೆ ಈ ಬಾರಿ ಏರ್ ಶೋ ಅನುಮಾನ : ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು:  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಮೀಪಿಸುತ್ತಿದ್ದು ಎಲ್ಲಾ ಸಿದ್ದತಾ ಕರ್ಯಗಳು ಅಂತಿಮ ಹಂತಕ್ಕೆ ಬಂದಿವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ದಸರಾ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಮಹದೇವಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್  ಸಿಇಒ ಗಾಯತ್ರಿ ಭಾಗಿಯಾಗಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ದಸರಾ ಆಚರಣೆಗೆ ಎಲ್ಲಾ ಸಿದ್ದತಾ ಕರ್ಯಗಳು ಅಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ ೩ರಂದು ೯.೧೫ರಿಂದ ೯.೪೦ ರ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ  ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದೆ. ಅಕ್ಟೋಬರ್ ೩ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ  ಕಾರ್ಯಕ್ರಮ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನ ಸಿಎಂ ನೀಡಲಿದ್ದಾರೆ. ೧೧ವೇದಿಕೆಗಳಲ್ಲಿ ೫೦೮ ಕಲಾ ತಂಡಗಳು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ಮಾಡಲಿದ್ದಾರೆ. ಅ ೫ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ತಿಳಿಸಿದರು.

ಈ ಬಾರಿ ಏರ್ ಶೋ ಅನುಮಾನ: ದಸರಾ ವೇಳೆ ಏರ್ ಶೋ ಆಯೋಜನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಈ ಬಾರಿ ಏರ್ ಶೋ ಅನುಮಾನ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಏರ್ ಶೋ ಇರೋದಿಲ್ಲ. ಇತರೆ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ತಿಳಿಸಿದರು.

ಯುವದಸರಾಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಖ್ಯಾತ ಸಂಗೀತ ನರ್ದೇಶಕರು ಭಾಗಿಯಾಗುತ್ತಿದ್ದಾರೆ. ಮಹರಾಜ ಕಾಲೇಜು ಮೈದಾನದಲ್ಲಿ ಟ್ರಾಫಿಕ್ ಸಮಸ್ಯೆ, ಲಾ ಅಂಡ್ ಆರ್ಡರ್ ಗೆ ತೊಂದರೆಯಾಗಬಹುದು. ಹಾಗಾಗಿ ನಗರದ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಲಾಗಿದೆ. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಲೈಟ್ ವ್ಯವಸ್ಥೆ ಮಾಡಲಾಗಿದೆ. ಯುವ ದಸರಾಕ್ಕೆ ಆಗಮಿಸುವ ಜನರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಯುವ ದಸರಾ ಕಾರ್ಯಕ್ರಮ  ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನ ನೇಮಕ ಮಾಡುತ್ತೇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *