ವಾಷಿಂಗ್ಟನ್: ಈ ವರ್ಷದ ನವಂಬರ್ ನಡೆಯಲಿರುವ ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಕಷ್ಟ ಸಾಧ್ಯ ಎನ್ನುವ ಸಂಗತಿ ಹಾಲಿ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಸುಳಿವು ದೊರೆತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಜೋ ಬಿಡೆನ್ ಅವರು ನವೆಂಬರ್ ೫ ರ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದಿರಬಹುದು ಮತ್ತು ಸ್ಪರ್ಧೆಯಿಂದ ಹೊರಗುಳಿಯಬೇಕಾದ ಕಲ್ಪನೆಯನ್ನು ಈಗಲೇ ಒಪ್ಪಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂದು ಅಧ್ಯಕ್ಷರಿಗೆ ನಿಕಟವಾಗಿರುವ ಮೂಲಗಳು ತಿಳಿಸಿವೆ
ನ್ಯೂಯಾರ್ಕ್ ಟೈಮ್ಸ್ ವರದಿ ಈ ವದರಿಯನ್ನು ಸಂಪೂರ್ಣವಾಗಿ ಅಲ್ಲಗಳೆದಿದೆ. ಹಾಲಿ ಅಧ್ಯಕ್ಷ ಜೋ ಬೈಡೆನ್ ಅವರು ಮತ್ತೊಮ್ಮೆ ಅಧ್ಯಕ್ಷರಾಗಲು ದೇಶಾದ್ಯಂತ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದಿದೆ.
ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ಅಮೇರಿಕಾ ಅಧ್ಯಕ್ಷರಾಗಲು ಎಲ್ಲಾ ಪ್ರಯತ್ನ ನಡೆಸಿದ್ದಾರೆ. ಇದಕ್ಕಾಗಿ ಜನರ ಮನ ಗೆಲ್ಲಲು ಕಸರತ್ತು ನಡೆಸಿದ್ದಾರೆ. ಚುನಾವಣೆಗೆ ಮುನ್ನೆ ಸೋಲು ಒಪ್ಪಿಕೊಳ್ಳುವ ಜಾಯಮಾನ ಅವರದಲ್ಲ ಎಂದು ಹೇಳಲಾಗಿದೆ.
ನವಂಬರ್ ೫ ರಂದು ಅಮೇರಿಕಾ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು ಹಾಲಿ ಅಧ್ಯಕ್ಷ ಜೋ ಬೈಡೆನ್ ಮತ್ತು ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನಡುವೆ ನೇರ ಹಣಾಹಣಿ ನಡೆಯುವುದು ಬಹುತೇಕ ಪಕ್ಕಾ ಆಗಿದೆ.