ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ.

ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ.

ಬೆಂಗಳೂರು: ಬೆಂಗಳೂರು ನಗರ ಹಾಗೂ ಕರ್ನಾಟಕದ ವಿವಿಧ ಕಡೆಗಳಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಜನತೆಗೆ ಕನ್ನಡದಲ್ಲಿಯೇ ಶುಭ ಕೋರಿದ್ದಾರೆ. ಉಭಯ ನಾಯಕರು ಎಕ್ಸ್ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.

‘ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

‘ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ’ ಎಂದು ಅಮಿತ್ ಶಾ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *