ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ: ಸ್ಪೋಟಕ ಭವಿಷ್ಯ ನುಡಿದ ಪೂಜಾರಿ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ದೇಶದಲ್ಲಿ ಪಿಎಂ ನರೇಂದ್ರ ಮೋದಿಯವರು ತಮಮ ಅಧಿಕಾರವನ್ನು ಕಳೆದುಕೊಳ್ಳಲಿದ್ದಾರೆ ಅಂತ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನದ ಅರ್ಚಕ ಮಹಾದೇವಪ್ಪ ಪೂಜಾರಿ ನುಡಿದಿದ್ದಾರೆ.

ಇದೇ ವೇಳೆ ಅವರು ಮಾತನಾಡಿ, ಅಮ್ಮ (ದೇವಿ) ಕನಸಿನಲ್ಲಿ ಬಂದು 9 ಜನ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದು, ಇಬ್ಬರಿಗೆ ಸಿಎಂ ಸ್ಥಾನ ನೀಡಲು ಪ್ರೇರಣೆ ನೀಡಿದ್ದಾರೆ, ನಾನು ನಾನು ಡಿಕೆ ಶಿವಕುಮಾರ್ಗೆ ಹೂವಿನ ಹಾರ ಹಾಕು ಅಂದೆ. ಆದರೆ ಸಿದ್ದರಾಮಯ್ಯಗೆ ಹೂವಿನ ಹಾರ ಹಾಕಿದ್ದಳು. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಎರಡನೇ ಅವಧಿಗೆ ಡಿಕೆ ಶಿವಕುಮಾರ್ ಸಿಎಂ ಆಗುವ ಕಾಲ ಬಂದಿದೆ ಎಂದು ಪೂಜಾರಿ ಹೇಳಿದ್ದಾರೆ.

ಅಂದ ಹಾಗೇ ಅರ್ಚಕ ಮಹದೇವಪ್ಪ ಪೂಜಾರಿ ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯವಾಣಿ ನುಡಿದಿದ್ದರು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.

Leave a Reply

Your email address will not be published. Required fields are marked *