ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಪ್ರದಾನ.
ಇಥಿಯೋಪಿಯಾ : ಪ್ರಧಾನಿ ನರೇಂದ್ರ ಮೋದಿ ಇಥಿಯೋಪಿಯಾ ಸೇರಿದಂತೆ ಮೂರು ದೇಶಗಳ ಪ್ರವಾಸದಲ್ಲಿದ್ದಾರೆ. ಇಥಿಯೋಪಿಯಾದಲ್ಲಿ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ನೀಡಿ ಗೌರವಿಸಿದ್ದಾರೆ. ಇದು ಭಾರತ-ಇಥಿಯೋಪಿಯಾ ಸಂಬಂಧಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ.
ಅಡಿಸ್ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಪ್ರಧಾನಿ ಮೋದಿ ಅವರಿಗೆ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ನವದೆಹಲಿಯಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.
For More Updates Join our WhatsApp Group :




