ಬೆಂಗಳೂರು : ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಸರದಿ ರಜೆಗಳು ಇರುವುದರಿಂದ ಸಾರ್ವಜನಿಕರು ತಮ್ಮ ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ಕೆಲವು ಖಾಸಗಿ ಪ್ರಯಾಣಿಕ ವಾಹನಗಳ ಮಾಲೀಕರು ಹಾಗೂ ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕಿಂಗ್ ಸಂದರ್ಭದಲ್ಲಿ ಪ್ರಯಾಣ ದರಗಳನ್ನ ಎರಡು ಮೂರು ಪಟ್ಟು ಹೆಚ್ಚಳ ಮಾಡಿ ಸಂಗ್ರಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ದಿನಾಂಕ 25-10-2024 ರಂದು ಆಯುಕ್ತರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ ಅಧ್ಯಕ್ಷತೆಯಲ್ಲಿ ಹಾಗೂ ಅಪರ ಸಾರಿಗೆ ಆಯುಕ್ತರು ಇವರ ಉಪಸ್ಥಿತಿಯಲ್ಲಿ ಖಾಸಗಿ ಬಸ್ ಮಾಲೀಕರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಮಾನ್ಯ ದೊರಕಿಂತ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ಪಡೆಯದಂತೆ ನಿರ್ದೇಶನ ನೀಡಲಾಗಿರುತ್ತದೆ ಆದಾಗಿಯೂ ದುಪ್ಪಟ್ಟು ಹಣವನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ಅನಾನುಕೂಲತೆ ಉಂಟುಮಾಡುವಂತಹ ವಾಹನ ಮಾಲೀಕರ ಮೇಲೆ ರಹದಾರಿ ಮತ್ತು ನೋಂದಣಿ ಪತ್ರವನ್ನು ಅಮಾನತುಪಡಿಸಲು ಹಾಗೂ ಟಿಕೆಟ್ ವಿತರಕರು ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ ಅದರಲ್ಲಿ ಸೂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಸೇವಾ ವಾಹನಗಳಲ್ಲಿ ಸ್ಪೋಟಕ ಸಾಮಗ್ರಿಗಳ ಸಾಗಾಣಿಕೆಗೆ ನಿಷೇಧಿಸಲಾಗಿದೆ ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಸಾರಿಗೆ ಇಲಾಖೆ ಖಾಸಗಿ ಬಸ್ ಗಳು ಹೆಚ್ಚಿನ ಟಿಕೆಟ್ ದರ ಸಂಗ್ರಹಿಸಿದರೆ ಸಾರ್ವಜನಿಕರು ದೂರು ನೀಡುವಂತೆ ಮನವಿ ಮಾಡಿದ ನಿಯಂತ್ರಣ ಕೊಠಡಿ ಸಂಖ್ಯೆ 9449863429, 9449863426 ಕರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು.
ದೀಪಾವಳಿಗೆ ಖಾಸಗಿ ಬಸ್ ದುಬಾರಿ ,ಖಡಕ್ ಎಚ್ಚರಿಕೆ ಕೊಟ್ಟ ಸಾರಿಗೆ ಇಲಾಖೆ!
