ಬೈಕ್ ತಪ್ಪಿಸಲು ಹೋಗಿ ಭೀಕರ ಅಪಘಾತ.
ಶಿವಮೊಗ್ಗ : ಎದುರಿಗೆ ತೆರಳುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ವಿದ್ಯುತ್ ಕಂಬಕ್ಕೆ ಗುದ್ದಿ ಬಸ್ ಪಲ್ಟಿಯಾಗಿದ್ದು, ಹಂಪ್ ತಪ್ಪಿಸಲು ಯತ್ನಿಸಿದ ಬೈಕ್ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
For More Updates Join our WhatsApp Group :




