ವಿವಾದದ ಹಿನ್ನೆಲೆ ಗೇಟ್ ಬಂದ್; ಶಾಂತಿ ಕಾಪಾಡಲು ಜಿಲ್ಲಾಡಳಿತದ ಕಠಿಣ ಕ್ರಮ
ದಾವಣಗೆರೆ: ಹರಿಹರದಲ್ಲಿರುವ ಪಂಚಮಸಾಲಿ ಮಠದಲ್ಲಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯ ವಿಚಾರವಾಗಿ ಮಠದ ಆವರಣದಲ್ಲಿ ಪದೇಪದೆ ಗಲಾಟೆಗಳು ನಡೆಯುತ್ತಿದ್ದ ಕಾರಣ, ಕಾನೂನು ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ.
ಮಠದ ಗೇಟ್ಗಳನ್ನು ಬಂದ್ ಮಾಡಲಾಗಿದ್ದು, ನಿಷೇಧಾಜ್ಞೆ ಕುರಿತು ಸೂಚಿಸುವ ಬ್ಯಾನರ್ಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ವಚನಾನಂದ ಸ್ವಾಮೀಜಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪರಿಸ್ಥಿತಿ ಶಾಂತಿಯುತವಾಗುವವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
For More Updates Join our WhatsApp Group :




