ಬೆಂಗಳೂರು: ಬೆಂಗಳೂರಿನಲ್ಲಿ ಭಾರತ್ ಪೆಟ್ರೋಲಿಯಂನ ನಿವೃತ್ತ ಸಿಎಫ್‌ಒ ಶಿವಕುಮಾರ್ ಅವರಿಂದ ಲಂಚ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಬೆನ್ನಲ್ಲೇ, ಮಗಳ ಸಾವಿನ ಸಂಕಟದಲ್ಲಿದ್ದ ಶಿವಕುಮಾರ್ ಅವರಿಂದ ಲಂಚ ಪಡೆದ ಆರೋಪದ ಮೇಲೆ ಒಬ್ಬ ಪಿಎಸ್‌ಐ ಮತ್ತು ಒಬ್ಬ ಪೊಲೀಸ್ ಕಾನ್‌ಸ್ಟೇಬಲ್ (ಪಿಸಿ) ಅವರನ್ನು ಅಮಾನತುಗೊಳಿಸಲಾಗಿದೆ. ಹಣ ಪಡೆದಿರುವುದು ದೃಢಪಟ್ಟ ಕೂಡಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಇಲಾಖೆ ಅಥವಾ ಸರ್ಕಾರದ ಯಾವುದೇ ಇಲಾಖೆಯಲ್ಲಿ ಲಂಚ ತೆಗೆದುಕೊಳ್ಳುವ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿಯಾಗುವುದಿಲ್ಲ ಎಂದು ಡಾ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರ ವಿರುದ್ಧ ಇಂತಹ ಯಾವುದೇ ಮಾಹಿತಿ ಬಂದರೂ, ಅದು 500 ರೂಪಾಯಿ ಆಗಿರಲಿ ಅಥವಾ 5000 ರೂಪಾಯಿ ಆಗಿರಲಿ ತಕ್ಷಣವೇ ಅಮಾನತು, ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದರು. ತನಿಖೆಯಲ್ಲಿ ಆರೋಪ ಸಾಬೀತಾದರೆ, ಅವರನ್ನು ಸೇವೆಯಿಂದ ವಜಾಗೊಳಿಸುವುದಾಗಿಯೂ ಸಚಿವರು ತಿಳಿಸಿದ್ದಾರೆ.
For More Updates Join our WhatsApp Group :
