ನಟ ಪುನೀತ್ ರಾಜ್ಕುಮಾರ್ ಅವರು ಅಗಲಿ 4 ವರ್ಷಗಳು ಕಳೆದಿವೆ. ಅವರ ಮೇಲೆ ಜನರು ಇಟ್ಟ ಅಭಿಮಾನ ಸ್ವಲ್ಪವೂ ಕಡಿಮೆ ಆಗಿಲ್ಲ. ಪ್ರತಿದಿನ ಹಲವಾರು ಅಭಿಮಾನಿಗಳು ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಇಂದು (ಅಕ್ಟೋಬರ್ 29) ಅವರ 4ನೇ ವರ್ಷದ ಪುಣ್ಯಸ್ಮರಣೆ .ಈ ಹಿನ್ನೆಲೆಯಲ್ಲಿ ಸಾವಿರಾರು ಅಭಿಮಾನಿಗಳು ಸಮಾಧಿಗೆ ನಮಿಸಿದ್ದಾರೆ.
ಈ ದಿನದಂದು ಅಪ್ಪುಗೆ ಗೌರವ ಸಲ್ಲಿಸಲು ರಾಜ್ಯದ ಬೇರೆ ಬೇರೆ ಊರುಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಬಂದಿದ್ದಾರೆ. ಪುನೀತ್ ರಾಜ್ಕುಮಾರ್ ಸಮಾಧಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಅನ್ನದಾನ, ರಕ್ತದಾನ, ನೇತ್ರದಾನ ನೋಂದಣಿ ಮುಂತಾದ ಜನಪರ ಕಾರ್ಯಗಳನ್ನು ಮಾಡಲಾಗುತ್ತಿದೆ. ಡಾ. ರಾಜ್ಕುಮಾರ್ ಕುಟುಂಬದರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
For More Updates Join our WhatsApp Group :




