Pushpa 2 | ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್

Pushpa 2 | ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್

ಪುಷ್ಪ 2’ (Pushpa 2) ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ (Allu Arjun) ಅವರನ್ನು ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಸಹ ಆರೋಪಿಯಾಗಿದ್ದರು. ಇಂದು ಬಂಧಿಸಿ, ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ದಿದ್ದಾರೆ

ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ. ಇದು ಪುಷ್ಪಾ-2 ಸಕ್ಸಸ್ ಸಂಭ್ರಮದಲ್ಲಿರುವ ಚಿತ್ರತಂಡಕ್ಕೆ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಶಾಕ್ ಕೊಟ್ಟಂತಾಗಿದೆ

ಇತ್ತೀಚೆಗೆ ನಟ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್ನಲ್ಲಿ ಸಂಭವಿಸಿದ ದುರಂತ ನೆನೆದು ಸಂತಾಪ ಸೂಚಿಸಿದ್ದರು. ಅಲ್ಲದೇ ಮೃಥ ರೇವತಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು

ಈ ನೋವಿನಲ್ಲಿ ನಮ್ಮ ತಂಡ ಅವರೊಂದಿಗೆ ಇರುತ್ತದೆ. ಶೀಘ್ರದಲ್ಲೇ ನಾನು ಅವರ ಮನೆಗೆ ಭೇಟಿ ನೀಡಲಿದ್ದೇನೆ. ಆಕೆಯ ಕುಟುಂಬದ ಭವಿಷ್ಯಕ್ಕಾಗಿ 25 ಲಕ್ಷ ರೂ.ಗಳ ಆರ್ಥಿಕ ಸಹಾಯ ನೀಡಲು ಬಯಸುತ್ತೇನೆ. ಗಾಯಗೊಂಡವರ ಚಿಕಿತ್ಸಾವೆಚ್ಚವನ್ನು ನಮ್ಮ ಇಡೀ ತಂಡ ನೋಡಿಕೊಳ್ಳಲಿದೆ. ಅಲ್ಲದೇ ಭವಿಷ್ಯದಲ್ಲಿ ಅಭಿಮಾನಿಗಳು ಎಚ್ಚರಿಕೆ ಮತ್ತು ಜಾಗರೀಕತೆಯಿಂದಿರಿ ಎಂದು ಎಚ್ಚರಿಕೆ ಸಂದೇಶ ನೀಡಿದ್ದರು

Leave a Reply

Your email address will not be published. Required fields are marked *