ನವದೆಹಲಿ: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ನೇಮಕ ಮಾಡಲಾಗಿದೆ.ಈವರೆಗೂ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು.
ಈ ಬಿಜೆಪಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಧಾ ಮೋಹನ್ ದಾಸ್ ಅಗರವಾಲ್ ಉಸ್ತುವಾರಿಯಾಗಿ, ಸುಧಾಕರ್ ರೆಡ್ಡಿ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದಾರೆ.
ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿದ್ದರು. ಇದೀಗ ಅವರನ್ನು ಅರುಣ್ ಸಿಂಗ್ ಜಾಗದಲ್ಲಿ ನೂತನ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಉತ್ತರ ಪ್ರದೇಶದ ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದ, ಅಗರ್ವಾಲ್ ಸದ್ಯ ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ವೃತ್ತಿಯಲ್ಲಿ ಅಗರ್ವಾಲ್ ವೈದ್ಯರಾಗಿದ್ದರು.