ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ Rahul Gandhi ಜಾಥಾ. || Bihar voter list

ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ Rahul Gandhi ಜಾಥಾ. || Bihar voter list

ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆವಿರುದ್ಧ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರ ಮೆರವಣಿಗೆ ನಡೆಯುತ್ತಿದೆ. ಸಂಸತ್ ಭವನದಿಂದ ಕೇಂದ್ರ ಚುನಾವಣಾ ಆಯೋಗದವರೆಗೆ ಮೆರವಣಿಗೆ ನಡೆಯಲಿದೆ. ಆದರೆ ಈ ಮೆರವಣಿಗೆಗೆ ಅನುಮತಿ ಸಿಗದ ಕಾರಣ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆಯುವ ಸಾಧ್ಯತೆಗಳು ಬಲವಾಗಿವೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಹಾಗೂ ಮತ ಕಳ್ಳತನದ ವಿರುದ್ಧ ಧ್ವನಿ ಎತ್ತುವುದು ಈ ಜಾಥಾದ ಉದ್ದೇಶವಾಗಿದೆ. ಎಸ್ಐಆರ್ ಸೋಗಿನಲ್ಲಿ ಬಿಹಾರದಲ್ಲಿ ಲಕ್ಷಾಂತರ ಮತದಾರರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ, ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯವಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಕಾಂಗ್ರೆಸ್ ನೇತೃತ್ವದಲ್ಲಿ 25 ವಿರೋಧ ಪಕ್ಷಗಳ 300ಕ್ಕೂ ಅಧಿಕ ಸಂಸದರು ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.

ಕಾಂಗ್ರೆಸ್ , ಸಮಾಜವಾದಿ ಪಕ್ಷ, ಟಿಎಂಸಿ, ಡಿಎಂಕೆ, ಎಎಪಿ , ಎಡ ಪಕ್ಷಗಳು, ಆರ್ಜೆಡಿ, ಎನ್ಸಿಪಿ (ಎಸ್ಪಿ), ಶಿವಸೇನೆ (ಯುಬಿಟಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಹಲವಾರು ಪಕ್ಷಗಳು ಬೆಳಗ್ಗೆ 11.30 ಕ್ಕೆ ಸಂಸತ್ತಿನ ಮಕರ ದ್ವಾರದಿಂದ ಮೆರವಣಿಗೆ ಆರಂಭಿಸಿವೆ.ಇಂಡಿಯಾ ಬ್ಲಾಕ್ ಬ್ಯಾನರ್ನಡಿ ಪ್ರತಿಭಟನೆ ನಡೆಯುತ್ತಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *