ರಾಯಚೂರು ನಗರಸಭೆ ಇನ್ಮುಂದೆ ಮಹಾನಗರ ಪಾಲಿಕೆ: ನಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ

ರಾಯಚೂರು ನಗರಸಭೆ ಇನ್ಮುಂದೆ ಮಹಾನಗರ ಪಾಲಿಕೆ: ನಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ

ರಾಯಚೂರು: ರಾಯಚೂರು ನಗರಸಭೆಯನ್ನು ರಾಯಚೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ರಾಜ್ಯ ಸರ್ಕಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.

ಮಹಾನಗರ ಪಾಲಿಕೆಯನ್ನಾಗಿ ಮಾಡುವುದಕ್ಕೆ ಇತ್ತೀಚೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಆದರೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದೇ ಇರುವುದ್ದರಿಂದ ಅಧಿಕೃತವಾಗಿ ಮಹಾನಗರ ಪಾಲಿಕೆಯಾಗಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಟಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಇತ್ತೀಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಗರಸಭೆಯನ್ನು ಮಹಾನಗರಪಾಲಿಕೆಯನ್ನಾಗಿಸುವ ಬಗ್ಗೆ ತಿರ್ಮಾನಿಸಲಾಗಿತ್ತು. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದೇ ಇರುವುದರಿಂದ ಅಧಿಕೃತ ಅಧಿಸೂಚನೆಯನ್ನು ನಗರಾಭಿವೃದ್ದಿ ಇಲಾಖೆ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ ಹೊರಡಿಸಿದ್ದಾರೆ.

ನಗರಸಭೆ ವ್ಯಾಪ್ತಿಗೆ ೪೩.೮೫ ಕಿ.ಮೀ. ವ್ಯಾಪ್ತಿ ಹಾಗೂ ಮೂರು ಲಕ್ಷ ಜನಸಂಖ್ಯೆಯನ್ನು ಪರಿಗಣಿಸಲಾಗಿದೆ. ಹೊಸದಾಗಿ ಯಾವುದೇ ಪ್ರದೇಶ ಸೇರ್ಪಡೆಗೊಳಿಸದೇ ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿರುವ ಪ್ರದೇಶವನ್ನೇ ಮಹಾನಗರ ಪಾಲಿಕೆ ವ್ಯಾಪ್ತಿಯನ್ನಾಗಿಸಲು ನಿರ್ಧರಿಸಲಾಗಿದೆ. ರಾಯಚೂರು ನಗರಸಭೆ ಮಹಾನಗರ ಪಾಲಿಕೆ ಅಧಿಸೂಚನೆ ಪ್ರಕಟವಾಗಿದ್ದರಿಂದ ಪಾಲಿಕೆಯಾಗಿ ಕಾರ್ಯನಿರ್ವಹಿಸುವ ಕಾರ್ಯ ಚಟುವಟಿಕೆಗಳಿಗೆ ವೇಗ ಪಡೆಯುಲು ಸಹಕಾರಿಯಾಗಿಲಿದೆ. ಅಲ್ಲದೇ ನಗರದ ಬಹುವರ್ಷಗಳ ಬೇಡಿಕೆಯಾಗಿದ್ದ ಮಹಾನಗರ ಪಾಲಿಕೆಯ ಮಾಡುವ ಬೇಡಿಕೆ ಈಡೇರಿಕೆಯಾಗಿದ್ದು, ರಾಜ್ಯ ಸರ್ಕಾರ ಮಹಾನಗರ ಪಾಲಿಕೆ ಅಗತ್ಯ ಸಿಬ್ಬಂದಿ, ಅಧಿಕಾರಿಗಳು ಹಾಗೂ ಸಕಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕಾಗಿದೆ.

Leave a Reply

Your email address will not be published. Required fields are marked *