ರಾಯಚೂರು || ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು – ಹಕ್ಕಿ ಜ್ವರದ ಶಂಕೆ

ಕೇಂದ್ರ ಸಚಿವ ವಿ.ಸೋಮಣ್ಣನ ಭೇಟಿ ಬಗ್ಗೆ ಸತ್ಯ ಬಿಚ್ಚಿಟ್ಟ ಡಿಕೆಶಿ..!

ರಾಯಚೂರು: ಜಿಲ್ಲೆಯಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿದ್ದು, ತೆಲಂಗಾಣದಲ್ಲಿ (Telangana) ಕಾಣಿಸಿಕೊಂಡ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ.

ಜಿಲ್ಲೆಯಲ್ಲಿ ಬರ್ಡ್ ಫ್ಲೂ ಹರಡುತ್ತಿರುವ ಆತಂಕ ಸೃಷ್ಟಿಯಾಗಿದ್ದು, ಮಾನ್ವಿ (Manvi) ತಾಲೂಕಿನಲ್ಲಿ ಪ್ರತೀದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳ ಸಾವನ್ನಪ್ಪುತ್ತಿದೆ.

ಮಕ್ಸೂದ್ ಅಲಿ ಎಂಬುವವರ ತೋಟದಲ್ಲಿ ಪ್ರತಿದಿನ 8-10 ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪಕ್ಷಿಗಳು ಮರದ ಮೇಲಿನಿಂದ ಏಕಾಏಕಿ ಕೆಳಗೆ ಬಿದ್ದು ಸಾಯುತ್ತಿವೆ. ಪಕ್ಷಿಗಳ ಸಾವಿಗೆ ಕಾರಣ ತಿಳಿಯದಿರುವುದರಿಂದ ಸ್ಥಳೀಯರಲ್ಲಿ ಹಕ್ಕಿ ಜ್ವರದ ಆತಂಕ ಶುರುವಾಗಿದೆ

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಪಶುವೈದ್ಯಾಧಿಕಾರಿಗಳು, ಮರದಿಂದ ಬಿದ್ದ ಪಕ್ಷಿಗಳಿಗೆ ಇಂಜೆಕ್ಷನ್ ನೀಡಿ ರಕ್ಷಣೆ ಮಾಡಿದ್ದಾರೆ. ಮೃತ ಪಕ್ಷಿಯ ಕಳೆಬರವನ್ನು ಬೆಂಗಳೂರಿನ ಐಎಚ್‌ವಿವಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

ಈ ವೇಳೆ ಮಾತನಾಡಿದ ಮಾನ್ವಿ ತಾಲೂಕು ಪಶು ವೈದ್ಯಾಧಿಕಾರಿ ಬಸವರಾಜ ಹಿರೇಮಠ ಅವರು, ಪಕ್ಷಿಗಳ ಸಾವಿಗೆ ಬೇರೆ ಬೇರೆ ಕಾರಣಗಳು ಇರುತ್ತದೆ. ಈಗಲೇ ಏನನ್ನೂ ಹೇಳಲು ಆಗಲ್ಲ. ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *