ರಾಯಚೂರು: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ರಾಯಚೂರು, ಬೆಳಗಾವಿ, ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
ರಾಯಚೂರು ಜಿ.ಪಂ.ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್ ಅವರ ಜವಾರ್ ಕಾಲೊನಿಯಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.