ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮಣ್ಣು ಕುಸಿತಗೊಂಡ ಪರಿಣಾಮ ಓರ್ವ ಕಾರ್ಮಿಕ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ.

ಗಾಯಗೊಂಡಿರುವ ಕಾರ್ಮಿಕನನ್ನು ಲಕ್ಷ್ಮಣ ಎಂದು ಗುರುತಿಸಲಾಗಿದೆ.
ಗಣಿಯ ಮಲ್ಲಪ್ಪ ಶಾಫ್ಟ್‌ನಲ್ಲಿ 2,600 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ತಲೆ ಹಾಗೂ ಕೈ-ಕಾಲಿಗೆ ಗಂಭೀರ ಗಾಯಗಳಾಗಿದ್ದು, ಚಿನ್ನದ ಗಣಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ (Belagavi) ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ
ಸ್ಧಳಕ್ಕೆ ಗಣಿ ಕಂಪನಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಹಟ್ಟಿ ಪೊಲೀಸ್ ಠಾಣಾ (Hatti Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.