ರಾಯಚೂರು : ವ್ಯಕ್ತಿ ಸಾವಿಗೆ ಪರಿಚಯಸ್ಥ ಮಹಿಳೆಯೇ (woman) ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ರಕ್ಷಿಸಿದ ಜಾಲಹಳ್ಳಿ ಠಾಣೆ ಪೊಲೀಸರು ಹಲ್ಲೆ ಆರೋಪದಡಿ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಬಸವರಾಜ ನಾಯಕ, ಯಂಕಮ್ಮ, ದುರ್ಗಮ್ಮ, ರೇಣುಕಾರಿಂದ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಬಸವರಾಜನ ಅಣ್ಣ ರಂಗಪ್ಪ ಸಾವಿಗೆ ಮಹಿಳೆ ಕಾರಣವೆಂದು ಆರೋಪಿಸಿದ್ದಾರೆ. 20 ದಿನಗಳ ಹಿಂದೆ ಮೂರ್ಛೆ ರೋಗದಿಂದ ರಂಗಪ್ಪ ಮೃತಪಟ್ಟಿದ್ದರು.
ರಂಗಪ್ಪಗೆ ಪರಿಯವಿದ್ದ ಮಹಿಳೆ ಜೊತೆ ತೆರಳಿದ್ದಾಗ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಅನುಮಾನದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿ ನಿಂದಿಸಲಾಗಿದೆ. ನೂರಾರು ಜನರ ಎದುರು ಮನಬಂದಂತೆ ಬೈದು, ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.