ಯಾದಗಿರಿ: ರೈಲ್ವೆ ಸ್ಟೇಷನ್ ನಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡದೇ ಮೊಬೈಲ್‌ನಲ್ಲಿ ಹರಟೆ ಹೊಡೆಯುತ್ತಿದ್ದ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿ ಸಿ.ಮಹೇಶ್‌ನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಮಹೇಶ್ ಯಾದಗಿರಿ ರೈಲ್ವೆ ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಟಿಕೆಟ್‌ಗಾಗಿ ನೂರಾರು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತಿದ್ದರು. ಟಿಕೆಟ್ ಕೌಂಟರ್ ಸಿಬ್ಬಂದಿ ಮಹೇಶ್ ಬಹಳ ಹೊತ್ತು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದ. ಈ ವೇಳೆ ಪ್ರಯಾಣಿಕನೊಬ್ಬ ವೀಡಿಯೋ ಮಾಡಿ ಸ್ಟೇಷನ್ ಮಾಸ್ಟರ್‌ಗೆ ಕಳುಹಿಸಿದ್ದಾರೆ
ಇದನ್ನು ಗಮನಿಸಿ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗೆ ಕಳುಹಿಸಿದ್ದಾರೆ. ಸ್ಟೇಷನ್ ವ್ಯವಸ್ಥಾಪಕ ಭಾಗಿರಥ ಮೀನಾ ತಕ್ಷಣವೇ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.