ಹಲವು ಜಿಲ್ಲೆಗಳಲ್ಲಿ ಮೇ 26 ರವರೆಗೆ ಮಳೆ: ಮೂರು ಜಿಲ್ಲೆಗಳಲ್ಲಿ Orange alert

Karnataka Rain Update  || ಮಳೆಯ ಅಬ್ಬರ ಕಡಿಮೆಯಾದರೂ 4 ಜಿಲ್ಲೆಗಳಲ್ಲಿ ಎಚ್ಚರಿಕೆ..!

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 26ರವರೆಗೆ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಗೊಳಿಸಿ ಹವಾಮಾನ ಇಲಾಖೆ ಆದೇಶಿಸಿದೆ.

ರಾಜ್ಯದ ಹಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಈ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದೆ.

ಬೆಂಗಳೂರು ಹವಾಮಾನ: ಬೆಂಗಳೂರಿನ ಹೆಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Leave a Reply

Your email address will not be published. Required fields are marked *