ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31ಲಿಅ ಮತ್ತು 20ಲಿಅ ಇರಲಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ.
16.09.2024
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ
ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಸಾಧ್ಯತೆ
17.09.2024
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ
ಒಳನಾಡಿನ ಕೆಲವು ಸ್ಥಳಗಳಲ್ಲಿ ಗಾಳಿ ಜೊತೆಗೆ ಮಳೆ
18.09.2024
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
19.09.2024
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿ ಬೀಸಲಿರುವ ಸಾಧ್ಯತೆ
20.19.2024
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ