ಬೆಂಗಳೂರು–ತುಮಕೂರು ಸೇರಿ ಕೆಲವೆಡೆ ಮಳೆ ಸಾಧ್ಯತೆ.

ಬೆಂಗಳೂರು–ತುಮಕೂರು ಸೇರಿ ಕೆಲವೆಡೆ ಮಳೆ ಸಾಧ್ಯತೆ.

ಕರ್ನಾಟಕ ಹವಾಮಾನ ವರದಿ.

ಬೆಂಗಳೂರು : ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.

ಎಲ್ಲಲ್ಲಿ ಮಳೆ?

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ, ಮಳೆ

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ತಾಪಮಾನ ಕನಿಷ್ಠ 18°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *