ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ. | Karnataka Rains

ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ. | Karnataka Rains

ಬೆಂಗಳೂರು: ಕರ್ನಾಟಕದ ವಿವಿಧೆಡೆ ಆಗಸ್ಟ್ 27ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಕೂಡಾ ಮಳೆಯಾಗಲಿದೆ.

ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಮಳೆ ಬಿಡುವು ಪಡೆದಿದೆ. ಎಂಎಂಹಿಲ್ಸ್​, ಕ್ಯಾಸಲ್​​ರಾಕ್, ಮಂಕಿ,ಲೋಂಡಾ, ಗೇರುಸೊಪ್ಪ, ಬೆಂಗಳೂರು ಎಚ್​​ಎಎಲ್​​, ಅಂಕೋಲಾದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದ್ದರೂ, ಬಿಸಿಲು ಕೂಡ ಇದೆ. ಎಚ್​​ಎಎಲ್​​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *