ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಮ್ ಚರಣ್ ನಟನೆಯ 'ಗೇಮ್ ಚೇಂಜರ್' ಬಿಡುಗಡೆ ದಿನಾಂಕ ಮುಂದೂಡಿಕೆ

ಸೌತ್ ಸೂಪರ್ ಸ್ಟಾರ್ ರಾಮ್ ಚರಣ್ ಹಾಗೂ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ತೆರೆಹಂಚಿಕೊಂಡಿರುವ ಬಹುನಿರೀಕ್ಷಿತ ಚಿತ್ರ ‘ಗೇಮ್ ಚೇಂಜರ್’ ಅನ್ನು ಈ ಸಾಲಿನ ಕ್ರಿಸ್ಮಸ್ನಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದ್ರೀಗ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಗೇಮ್ ಚೇಂಜರ್ನ ಹೊಸ ರಿಲೀಸ್ ಡೇಟ್ ಅನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ತಮ್ಮದೇ ಬೇಡಿಕೆ ಹೊಂದಿರುವ ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಪ್ರಮಖ ಪಾತ್ರಗಳನ್ನು ನಿರ್ವಹಿಸಿರುವ ಗೇಮ್ ಚೇಂಜರ್ ಚಿತ್ರವನ್ನು ಈ ಮೊದಲು 2024ರ ಕ್ರಿಸ್ಮಸ್ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದ್ರೀಗ ಬಹುನಿರೀಕ್ಷಿತ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಿನಿಮಾ ಮುಂದಿನ ವರ್ಷ ತೆರೆಕಾಣಲಿದೆ. ಹೌದು, 2025ರ ಸಂಕ್ರಾಂತಿ ಸಂದರ್ಭ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ.

ಚಲನಚಿತ್ರ ನಿರ್ಮಾಪಕ ದಿಲ್ ರಾಜು ಅವರು ವಿಡಿಯೋ ಅನಾವರಣಗೊಳಿಸಿ, ಸಿನಿಮಾ ಮುಂದಕ್ಕೆ ಹೋಗಿರೋದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಭಾರತ ಮತ್ತು ವಿದೇಶಗಳಲ್ಲಿ ವಿತರಣೆಗೆ ಸಂಬಂಧಿಸಿದ ಕಾರಣಗಳಿಂದಾಗಿ, ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಹಾಗಾಗಿ ಸಂಕ್ರಾಂತಿಯ (ಜನವರಿ 14) ಸಮಯವೇ ಸರಿ ಎಂದು ನಿರ್ಮಾಪಕರು ನಿರ್ಧರಿಸಿದ್ದಾರೆ.

ಈ ವರ್ಷದ ಡಿಸೆಂಬರ್ ವೇಳೆಗೆ ಗೇಮ್ ಚೇಂಜರ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಳ್ಳಲಿವೆ ಎಂದು ತಯಾರಕರು ಭರವಸೆ ನೀಡಿದ್ದಾರೆ. ಚಿತ್ರದ ಟೀಸರ್ ಕೂಡಾ ಡಿಸೆಂಬರ್ನಲ್ಲಿಯೇ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *