ರಾಮನಗರ: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ದೂರಲಾಗಿದೆ. ವಾಹನ ಚಾಲಕರ ಬಳಿ ಸಾವಿರ ರೂಪಾಯಿ ಲಂಚ ಕೇಳಿದ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೃಷ್ಣೇಗೌಡರು VLTD ಅನುಮೋದನೆಗೆಂದು ಹಣ ಕೇಳಿದ್ದಾರೆ ಎಂದು ಚಾಲಕರು ಆರೋಪಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ, ಕನ್ನಡಪರ ಹೋರಾಟಗಾರರು RTO ಕೃಷ್ಣೇಗೌಡರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
For More Updates Join our WhatsApp Group :
