ಜೋರಾಯ್ತು ವಕ್ಫ್ ಆಸ್ತಿ ಕೆಸರೆರೆಚಾಟ : ಇಂದು ಬಿಜೆಪಿ ಪ್ರತಿಭಟನೆ

ಜೋರಾಯ್ತು ವಕ್ಫ್ ಆಸ್ತಿ ಕೆಸರೆರೆಚಾಟ : ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ 3 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹೊಸ್ತಿಲಲ್ಲಿ ವಕ್ಫ್ ಆಸ್ತಿ ವಿವಾದ ಬುಗಿಲೆದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ವರ್ಸ್ಸ್ ವಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ರಾಜಕೀಯ ಕೆಸರೆರಚಾಟಕ್ಕೆ ವಕ್ಫ್ ಪ್ರಮುಖ ಅಸ್ತವಾಗಿ ಪರಿಣಮಿಸಿದೆ.

ವಕ್ಫ್ ಭೂ ಮಾಲೀಕತ್ವ ವಿವಾದಕ್ಕೆ ಸಂಬOಧಿಸಿದOತೆ ಅಲ್ಪಸಂಖ್ಯಾತ ವಕ್ಫ್ ಖಾತೆ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿOದ ಕೈಬಿಡುವಂತೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆಕೊಟ್ಟಿದ್ದು, ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸಿಎಂ ಮಾತಿಗೆ ಪೂರಕವಾಗಿ ಸಚಿವ ಡಾ.ಜಿ.ಪರಮೇಶ್ವರ ಸಹ ಪ್ರತಿಕ್ರಿಯಿಸಿದ್ದು, ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯುವOತೆ ಮುಖ್ಯಮಂತ್ರಿ ಸೂಚನೆ ನೀಡುವುದರೊಂದಿಗೆ ವಿವಾದಕ್ಕೆ ತೆರೆಬಿದ್ದಿದೆ ಎಂದಿದ್ದಾರೆ. ಇನ್ನೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಚಿವ ಜಮೀರ್ ಅಹಮದ್ ಅವರ ನಡೆಯನ್ನು ಟೀಕಿಸುತ್ತಲೇ ಬಿಜೆಪಿ ವಿರುದ್ಧ ಪ್ರಕರಣಕ್ಕೆ ಹೊಸ ತಿರುವು ನೀಡುವ ಹೇಳಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲು ಯಾರು ಕಾರಣಕರ್ತರು ಎಂಬುದನ್ನು ತನಿಖೆ ಮಾಡಿ ಕ್ರಮ ಕೈಗೊಳ್ಳುವಂತೆ ತಾವೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಒತ್ತಾಯಿಸುತ್ತೇನೆ. ಒಂದು ವೇಳೆ ಬಿಜೆಪಿಯವರೇ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಿಸಿ ಉದ್ದೇಶಪೂರ್ವಕ ರಾಜಕೀಯ ಮಾಡುತ್ತಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

ಸಿಎಂ ಹೇಳಿಕೆಯಲ್ಲೇನಿದೆ: ಬಿಜೆಪಿ ಪ್ರತಿಭಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವಕ್ಫ್ ವಿಚಾರದಲ್ಲಿ ರೈತರ ಪಹಣಿ ಬದಲಾವಣೆ ಸಂಬOಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಜಮೀನಿಗೆ ಸಂಬOಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ. ವಕ್ಫ್ ಆಸ್ತಿಗೆ ಸಂಬOಧಿಸಿದOತೆ ಬಿ.ಎಸ್ ಯಡಿಯೂರಪ್ಪ, ಡಿವಿ ಸದಾನಂದಗೌಡ, ಜಗದೀಶ್ ಶೆಟ್ಟರ್ ಹಾಗೂ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲೂ ನೋಟಿಸ್ ನೀಡಲಾಗಿತ್ತು. ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು ಎಂದು ಬಸವರಾಜ ಬೊಮ್ಮಾಯಿ ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಎಷ್ಟೇ ಸುಳ್ಳು ಆರೋಪಗಳನ್ನು ಮಾಡಿದರೂ ಈ ಯೋಜನೆಗಳಿಂದ ಸಂತೃಪ್ತರಾಗಿರುವ ಫಲಾನುಭವಿಗಳು ಇದಕ್ಕೆ ಕಿವಿಗೊಡದೆ ಇರುವುದು ನಾಯಕರ ನಿದ್ದೆಗೆಡಿಸಿದೆ. ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ. ಇದಕ್ಕಾಗಿ ಒಂದೆಡೆ ಪ್ರಧಾನಿ ಮೋದಿ ಅವರಿಂದ ಹಿಡಿದು ರಾಜ್ಯದ ಸಣ್ಣಪುಟ್ಟ ನಾಯಕರ ವರೆಗೆ ಎಲ್ಲರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಬೆದರಿಕೆ ಮತ್ತು ಒತ್ತಡದ ತಂತ್ರಕ್ಕೆ ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನುಡಿದಂತೆ ನಡೆಯುತ್ತೇವೆ ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ಅವಧಿಯಲ್ಲಿ ಯಾವುದೇ ನೋಟಿಸ್ ನೀಡಿಲ್ಲ: ಸಿಎಂ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ ನೋಟಿಸ್ ಕೊಡಲಾಗಿತ್ತು ಎಂಬ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಜಾಲತಾಣ ಎಕ್ಸ್ನಲ್ಲಿ ಸ್ಪಷ್ಟೀಕರಣ ನೀಡಿದ್ದು, ಸಿಎಂ ಆರೋಪಿಸಿರುವಂತೆ ತಮ್ಮ ಅವಧಿಯಲ್ಲಿ ರೈತರಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಹಾಗೂ ರೈತರ ಜಮೀನು ವಶಕ್ಕೆ ಪಡೆದುಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರವಾಗಿದೆ ಎಂದಿದ್ದಾರೆ.

ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ ವಿವಾದಕ್ಕೆ ತೆರೆ ಬಿದ್ದಿರುವ ವಕ್ಫ್ ಕೂಡ ಸೇರಿದೆ. ರಾಜ್ಯದ ಪ್ರಜ್ಞಾವಂತ ಜನರು ಇಂತಹ ಕಿಡಿಗೇಡಿತನದ ರಾಜಕೀಯವನ್ನು ತಿರಸ್ಕರಿಸಿ ನಮ್ಮ ಅಭಿವೃದ್ದಿ ಪರ ರಾಜಕೀಯದ ಪರವಾಗಿ ನಿಲ್ಲಬೇಕು-ಸಿದ್ದರಾಮಯ್ಯ, ಸಿಎಂ.

ವಕ್ಫ್ ವಿಚಾರವನ್ನು ಬಿಜೆಪಿ ನಾಯಕರು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯುವAತೆ ಮುಖ್ಯಮಂತ್ರಿ ಸೂಚನೆ ನೀಡಿದ್ದು, ವಿವಾದಕ್ಕೆ ಅಂತ್ಯ ಹಾಡಲಾಗಿದೆ. ಬಿಜೆಪಿ ಸರ್ಕಾರ ರೈತರ ಪರವಾಗಿ ಮೂರು ಕೃಷಿ ಕಾಯ್ದೆಗಳನ್ನು ಮಂಡಿಸಿದ್ದು, ಅದರಿಂದ ಹಲವು ರೈತರು ಸಾವನ್ನಪ್ಪಿದ್ದು, ಇದರಿಂದ ಅವರ ಬದ್ಧತೆ ಏನು ಎಂಬುದು ತಿಳಿಯುತ್ತದೆ. ಡಾ.ಜಿ.ಪರಮೇಶ್ವರ್, ಗೃಹ ಸಚಿವರು.

ನಾನು ಸಿಎಂ ಆಗಿದ್ದ ಅವಧಿಯಲ್ಲಿ ರೈತರಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಹಾಗೂ ರೈತರ ಜಮೀನು ವಶಕ್ಕೆ ಪಡೆದುಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರವಾಗಿದೆ. ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ನೀಡಿರುವ ವರದಿ ಮೇಲೆ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಸಿಬಿಐ ಇಲ್ಲವೇ, ಎಸ್‌ಐಟಿ ತನಿಖೆಗೆ ವಹಿಸಬೇಕು.-ಬಸವರಾಜಬೊಮ್ಮಾಯಿ, ಸಂಸದ ಹಾಗೂ ಮಾಜಿ ಸಿಎಂ

ಸಿಎO ಯಾವುದೇ ಕಾನೂನು ಬಾಹಿರ ಸೂಚನೆ ನೀಡುವುದಿಲ್ಲ. ಆದರೆ ವಕ್ಫ್ ಸಚಿವರಾಗಿರುವ ಜಮೀರ್ ಅಹಮದ್ ಸಿಎಂ ಹೆಸರು ಬಳಸಿಕೊಂಡು ನಿಯಮ ಬಾಹಿರವಾಗಿ ಖಾತೆಗಳನ್ನು ಬದಲಾವಣೆ ಮಾಡಿ ಎನ್ನುವುದು ತಪ್ಪು. ಅಧಿಕಾರಿಗಳು ಇದನ್ನು ಪಾಲಿಸುವುದು ಸರಿಯಲ್ಲ. ಇದಕ್ಕಿಂತ ಪ್ರಮುಖವಾಗಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲು ಯಾರು ಕಾರಣೀಕರ್ತರು ಎಂಉದು ಪತ್ತೆಯಾಗಬೇಕಿದೆ. ಬಿಜೆಪಿಯವರೇ ಉದ್ದೇಶಪೂರ್ವಕವಾಗಿ ಏಕೆ ಮಾಡಿಸಿರಬಾರದು.-ಕೆ.ಎನ್.ರಾಜಣ್ಣ, ಸಹಕಾರ ಸಚಿವ.

Leave a Reply

Your email address will not be published. Required fields are marked *